HomeKarnatakaಇಬ್ಬರು ಸಚಿವರ ಜಟಾಪಟಿ: ಅಕ್ಕಪಕ್ಕ ಕೂರಿಸಿಕೊಂಡು ಸಂಧಾನ ಮಾಡಿದ ಸಿಎಂ!

ಇಬ್ಬರು ಸಚಿವರ ಜಟಾಪಟಿ: ಅಕ್ಕಪಕ್ಕ ಕೂರಿಸಿಕೊಂಡು ಸಂಧಾನ ಮಾಡಿದ ಸಿಎಂ!

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಇಬ್ಬರು ಸಚಿವರ ಜಟಾಪಟಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದು ವಿರೋಧ ಪಕ್ಷದವರಿಗೆ ಆಹಾರವಾಗುತ್ತದೆ ಎಂಬುದನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಧಾನ ಮಾಡಿದ್ದಾರೆ. ಇಬ್ಬರು ಸಚಿವರನ್ನು ಅಕ್ಕಪಕ್ಕ ಕೂರಿಸಿಕೊಂಡು ಹೈಕಮಾಂಡ್ ಹೇಳಿದಂತೆ ಕೇಳೋಣ ಎಂದು ಸಮಾಧಾನ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಔತಣಕೂಟ ಆಯೋಜಿಸಲಾಗಿತ್ತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಔತಣ ಕೂಟಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸಚಿವರ ಜೊತೆ ಸಂಧಾನ ನಡೆಸಿದ್ದಾರೆ.

ಸಿದ್ದರಾಮಯ್ಯ ಆಪ್ತ ಸಚಿವರು: ಜಟಾಪಟಿಯಲ್ಲಿ ತೊಡಗಿದ್ದು ಸಿದ್ದರಾಮಯ್ಯ ಆಪ್ತರಾದ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್. ಆದ್ದರಿಂದ ಸಿದ್ದರಾಮಯ್ಯ ಸಚಿವರ ನಡುವೆ ಸಂಧಾನ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನೂರು ಶಿವಶಂಕರಪ್ಪ ನಿಧನದ ಕಾರಣಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪಟ್ಟು ಹಿಡಿದಿದ್ದಾರೆ.

ಇದರಿಂದ ಕೋಪಗೊಂಡಿದ್ದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, “ನಮ್ಮ ಕ್ಷೇತ್ರದಲ್ಲಿ ಬಂದು ಮಾತನಾಡಲು ಅವನ್ಯಾರು?” ಎಂದು ಏಕವಚನದಲ್ಲಿಯೇ ಪ್ರಶ್ನೆ ಮಾಡಿದ್ದರು. ಆದ್ದರಿಂದ ಸಚಿವ ಜಟಾಪಟಿ ಚರ್ಚೆಗೆ ಕಾರಣವಾಗಿತ್ತು.

ಈಗ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರದ ಬಗ್ಗೆ ಮಾತನಾಡಬೇಡಿ. ಹೈಕಮಾಂಡ್ ಎಲ್ಲವನ್ನೂ ನೋಡಿಕೊಳ್ಳುತ್ತದೆ. ನಿಮ್ಮ ಮಾತು ವಿಧಾನಸಭೆ ಅಧಿವೇಶನದ ಸಮಯದಲ್ಲಿ ವಿರೋಧ ಪಕ್ಷಗಳಿಗೆ ಆಹಾರ ಕೊಟ್ಟಂತೆ ಆಗುತ್ತದೆ ಎಂದು ತಿಳಿ ಹೇಳಿದ್ದಾರೆ.

ಇಬ್ಬರನ್ನು ಒಟ್ಟಿಗೆ ಕೂರಿಸಿಕೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪ ಚುನಾವಣೆಗೆ ಅಭ್ಯರ್ಥಿ ಯಾರು? ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅಭ್ಯರ್ಥಿ ಗೆಲುವಿಗೆ ನಾವು ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಜಮೀರ್ ಅಹ್ಮದ್ ಖಾನ್ ದಾವಣಗೆರೆಗೆ ಭೇಟಿ ನೀಡಿದ್ದರು. ಆಗ ಮುಸ್ಲಿಂ ಸಮುದಾಯದ ಮುಖಂಡರು ಅವರನ್ನು ಭೇಟಿಯಾಗಿ, ಈ ಬಾರಿ ತಮ್ಮ ಸಮುದಾಯದ ಮುಖಂಡರಿಗೆ ದಾವಣಗೆರೆ ದಕ್ಷಿಣದಲ್ಲಿ ಟಿಕೆಟ್ ನೀಡಲು ಹೈಕಮಾಂಡ್​​ಗೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದರು.

ಶಾಮನೂರು ಶಿವಶಂಕರಪ್ಪ 2023ರ ಚುನಾವಣೆ ಸಂದರ್ಭದಲ್ಲಿ ಮುಂದೆ ಕ್ಷೇತ್ರದಲ್ಲಿ ಮುಸ್ಲಿಂಮರಿಗೆ ಟಿಕೆಟ್ ಕೊಡುವುದಾಗಿ ಹೇಳಿದ್ದು, ಅದರ ವಿಡಿಯೋ ಇದೆ. ಹೀಗಾಗಿ, ಮುಸ್ಲಿಂ ಸಮಾಜಕ್ಕೆ ಟಿಕೆಟ್ ಸಿಗಬೇಕು ಎಂದು ಒತ್ತಾಯಿಸಿದ್ದರು.

ಆದರೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಮ್ಮ ಪುತ್ರ ಸಮರ್ಥ ಶಾಮನೂರು ಅಭ್ಯರ್ಥಿಯಾಗಲಿ ಎಂದು ಬಯಸುತ್ತಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಮುಸ್ಲಿಂಮರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದು ಸಚಿವರ ಆಕ್ರೋಶಕ್ಕೆ ಕಾರಣವಾಗಿತ್ತು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular