ಕಾಂಗ್ರೆಸ್ ಕತೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ: 500 ರೂ. ಕೊಟ್ಟು ಜನರನ್ನು ಕರೆತನ್ನಿ ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿ ಟ್ವೀಟ್

ಪ್ರತಿಯೊಬ್ಬರಿಗೂ 500 ರೂಪಾಯಿ ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಟ್ವೀಟ್ ಮಾಡಲಾಗಿದೆ.

ಟ್ವಿಟರ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಟ್ವೀಟ್ ಮಾಡಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ ಸಿದ್ಧರಾಮಯ್ಯ ಅವರು ಬಸ್ ನಲ್ಲಿ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮೊದಲಾದ ನಾಯಕರೊಂದಿಗೆ ಪ್ರಯಾಣಿಸುವಾಗ ಹಣ ಹಂಚಿಕೆ ಬಗ್ಗೆ ಮಾತನಾಡಿದ್ದು, ವಿಡಿಯೋ ಹಂಚಿಕೊಂಡಿರುವ ಬಿಜೆಪಿ ವ್ಯಂಗ್ಯವಾಡಿದೆ.

https://twitter.com/BJP4Karnataka/status/1630983257582862353

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read