HomeKarnatakaBIG NEWS: ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ರಾಜ್ಯಪಾಲರ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾದ ಸಿಎಂ...

BIG NEWS: ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ರಾಜ್ಯಪಾಲರ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

ರಾಜ್ಯಪಾಲರ ಆದೇಶದ ವಿರುದ್ಧ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಚರ್ಚೆ ನಡೆಸಿದ್ದಾರೆ.

ರಾಜ್ಯಪಾಲರ ಆದೇಶದ ಬಗ್ಗೆ ಎರಡು ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮೊದಲು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕಾ ಅಥವಾ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾ? ಎಂಬ ಬಗ್ಗೆ ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular