HomeKarnatakaBREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಯಾವ ಸೆಕ್ಷನ್ ಗಳ ಅಡಿ FIR ದಾಖಲು?...

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಯಾವ ಸೆಕ್ಷನ್ ಗಳ ಅಡಿ FIR ದಾಖಲು? ಇಲ್ಲಿದೆ ಮಾಹಿತಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದು, ಸಿಎಂ ಪತ್ನಿ ಪಾರ್ವತಿ ಎ2, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂಮಾಲೀಕ ದೇವರಾಜು ಎ4 ಹಾಗೂ ಇತರರು ಎ5 ಎಂದು ಉಲ್ಲೇಖಿಸಲಾಗಿದೆ.

ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular