ಸತ್ಯಮೇವ ಜಯತೆ!! ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಎಂದ ಬಿಜೆಪಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದಕ್ಕೆ ರಾಜ್ಯ ಬಿಜೆಪಿ ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಹೇಳಿದೆ.

ಜಯತೆ, ಜಯತೆ, ಸತ್ಯಮೇವ ಜಯತೆ!! ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ ಎಂದು ತಿಳಿಸಿದೆ.

ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.

ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read