ಬೆಂಗಳೂರು: ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಅಡಿದ್ದು ನಾನೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ‘ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ’ದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಇದೀಗ ತೀವ್ರ ಸಂಚಲನ ಮೂಡಿಸಿದೆ.
ಕಾರ್ಯಕ್ರಮದಲ್ಲಿ ಎಸ್‌ಸಿ ಸಮುದಾಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡುತ್ತಿದ್ದಾಗ, ಸಭಿಕರೊಬ್ಬರು ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸಿದರು. ಇದರಿಂದ ಕೊಂಚ ಭಾವೋದ್ವೇಗಕ್ಕೊಳಗಾದ ಸಿದ್ದರಾಮಯ್ಯ, ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ಯಾರು? ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ ಎಂದು ನೇರವಾಗಿ ಹೇಳಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಚರ್ಚೆಗೆ ತೆರೆ ಎಳೆದಿದ್ದಾರೆ. ಸಿದ್ದರಾಮಯ್ಯ ನೀಡಿರುವ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

