HomeKarnatakaಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿದ್ಧರಾಮಯ್ಯ: ದೇವೇಗೌಡರಿಗೆ ಸಾಂತ್ವನ

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿದ್ಧರಾಮಯ್ಯ: ದೇವೇಗೌಡರಿಗೆ ಸಾಂತ್ವನ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ದೇವೇಗೌಡರ ಪತ್ನಿ ಚೆನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ, ಬಳಿಕ ದುಃಖತಪ್ತ ಕುಟುಂಬ ಸದಸ್ಯರನ್ನು ಸಂತೈಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು‌ ಸಮೀಪದಿಂದ ಬಲ್ಲವನು. ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು. ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular