HomeKarnatakaನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಮೂಲವೇತನ ಶೇಕಡ 58.50 ರಷ್ಟು ಹೆಚ್ಚಳ

ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಮೂಲವೇತನ ಶೇಕಡ 58.50 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ಪರಿಷ್ಕರಿಸಲಾಗಿದೆ. ಆಗಸ್ಟ್ 1ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇಕಡ 58.50ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ವೇತನ, ಪಿಂಚಣಿ ಹೆಚ್ಚಳ ಕುರಿತಂತೆ ಹೇಳಿಕೆ ದಾಖಲಿಸಿದ ಸಿಎಂ, ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯವೇತನ ಆಯೋಗವು ಕಳೆದ ಮಾರ್ಚ್ 24ರಂದು ತನ್ನ ಶಿಫಾರಸುಗಳನ್ನು ಸಲ್ಲಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. 2022ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ  ಆಗಸ್ಟ್ 1ರಿಂದ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನಂತೆ ಸರ್ಕಾರಿ ನೌಕರರ ಮೂಲವೇತನಕ್ಕೆ ಶೇಕಡ 31 ರಷ್ಟು ತುಟ್ಟಿಭತ್ಯೆ ಮತ್ತು ಶೇಕಡ 27.50ರಷ್ಟು ಫಿಟ್ ಮೆಂಟ್ ಸೇರಿಸಿ ಒಟ್ಟು ಶೇಕಡ 58.50 ವೇತನ ಮತ್ತು ಪಿಂಚಣಿ ಪರಿಷ್ಕರಿಸಲಾಗುವುದು. ಈ ಕ್ರಮದಿಂದ 17000 ರೂ. ಇರುವ ಮೂಲವೇತನ 27 ಸಾವಿರಕ್ಕೆ ಹಾಗೂ ಗರಿಷ್ಠ 1.50 ಲಕ್ಷ ಇರುವ ವೇತನ 2.41 ಲಕ್ಷಕ್ಕೆ ಹೆಚ್ಚಳವಾಗಲಿದೆ. ಕನಿಷ್ಠ ಪಿಂಚಣಿ 8500 ನಿಂದ 13,500 ರೂ., ಗರಿಷ್ಠ ಪಿಂಚಣಿ 75,300 ರೂ.ನಿಂದ 1.20 ಲಕ್ಷ ರೂಪಾಯಿಗೆ ಪರಿಷ್ಕರಣೆ ಆಗಲಿದೆ. ಇದರಿಂದ ಸರ್ಕಾರಕ್ಕೆ 20208 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular