ನಿಮ್ಮ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ; ಸುಳ್ಳಾದರೆ ನೀವು ನಿವೃತ್ತಿ ಘೋಷಿಸುವಿರಾ? ಪ್ರಧಾನಿ ಮೋದಿಗೆ ಸಿಎಂ ಸವಾಲು

ಬೆಂಗಳೂರು: ಬಿಜೆಪಿಯವರ ವಿರುದ್ಧ ಸಾಲು ಸಾಲು ಆರೋಪಗಳಿವೆ. ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದೆ.330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ಮಾಡಿರುವುದು ಅವರ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇಲ್ಲವಾದರೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಸುಳ್ಲಾದರೆ ಅವರು ನಿವೃತ್ತಿ ಘೋಷಲಿ ಎಂದು ಸವಾಲು ಹಾಕಿದರು.

ಸುಳ್ಳು ಹೇಳಲು ಇತಿಮಿತಿ ಇರಬೇಕು. ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುವುದು ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

ಇನ್ನು ಉಪಚುನಾವಣೆ ವಿಚಾರವಾಗಿ ಇಂದು ಮತದಾನ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಜನಸ್ಪಂದನೆ ನೋಡಿದರೆ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read