HomeKarnatakaವಿಧಾನಸೌಧ ಬಳಿ ತಮ್ಮ ಕಾರು ತೆಗೆಸಿದ ಅಧಿಕಾರಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ

ವಿಧಾನಸೌಧ ಬಳಿ ತಮ್ಮ ಕಾರು ತೆಗೆಸಿದ ಅಧಿಕಾರಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ವಿಧಾನಸೌಧದ ಬಳಿ ತಮ್ಮ ಕಾರು ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದು, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸಭೆ ಕಲಾಪ ಮುಗಿಸಿ ತೆರಳುತ್ತಿದ್ದ ಸಂದರ್ಭದಲ್ಲಿ ತಮ್ಮ ಕಾರು ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಭದ್ರತಾ ಉಸ್ತುವಾರಿ ಉಪ ಪೊಲೀಸ್ ಆಯುಕ್ತ ಯೋಗೇಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧ ಪಶ್ಚಿಮದ್ವಾರದ ಕೆಂಗಲ್ ಹನುಮಂತಯ್ಯ ಗೇಟ್ ಬಳಿ ಕಲಾಪ ಮುಗಿಸಿ ಮೆಟ್ಟಿಲುಗಳನ್ನು ಇಳಿದು ಬಂದ ಸಿದ್ದರಾಮಯ್ಯ ಅವರಿಗೆ ತಮ್ಮ ಕಾರು ಇಲ್ಲದಿರುವುದು ಕಂಡುಬಂದಿದೆ. ಗೇಟ್ ಬಳಿ ಕಾರಿಗಾಗಿ ಕಾಯಬೇಕಾಗಿ ಬಂದಿದ್ದರಿಂದ ತಮ್ಮ ಕಾರು ತೆಗೆಸಿದ ಡಿಸಿಪಿ ಯೋಗೇಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾರಿನ ಚಾಲಕನಿಗೆ ಏಕೆ ವಿಳಂಬವಾಗಿದೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರಿಗೆ ಕಾರನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲು ಡಿಸಿಪಿ ಸೂಚಿಸಿರುವುದಾಗಿ ಚಾಲಕ ತಿಳಿಸಿದ್ದಾರೆ. ಈ ವೇಳೆ ಅಲ್ಲಿಂದ ಡಿಸಿಪಿ ಯೋಗಿಶ್ ಅವರನ್ನು ಕರೆದ ಸಿದ್ದರಾಮಯ್ಯ ಸಿಬ್ಬಂದಿ ಸಮ್ಮುಖದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನ ಕಾರನ್ನು ಇಲ್ಲಿಂದ ಏಕೆ ತೆಗೆಸಿದೆ ಎಂದು ಪ್ರಶ್ನಿಸಿದ್ದು, ಅಧಿಕಾರಿಗಳ ನಡವಳಿಕೆ ತಿದ್ದಿಕೊಳ್ಳುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನ ಮೇಲೆ ಆರೋಪಗಳಿವೆ. ವಿಧಾನಸೌಧಕ್ಕೆ ಬರುವ ಶಾಸಕರು, ಜನಪ್ರತಿನಿಧಿಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎನ್ನುವ ದೂರುಗಳು ಬಂದಿವೆ. ಜನಪ್ರತಿನಿಧಿಗಳ ಜೊತೆಗೆ ನಡೆದುಕೊಳ್ಳುವ ರೀತಿ ಈ ಸರಿ ಇಲ್ಲ. ಇನ್ನು ಮುಂದೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿದ್ದು, ಬಳಿಕ ಸ್ಥಳಕ್ಕೆ ಕಾರು ಆಗಮಿಸಿದ ನಂತರ ಸಿದ್ದರಾಮಯ್ಯ ಸ್ಥಳದಿಂದ ತೆರಳಿದ್ದಾರೆ.

ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ: ಡಿಸಿಎಂ ಪರಮೇಶ್ವರ್

ಬೆಂಗಳೂರು: ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿಯ 7ನೇ ಕರಡು ಪ್ರತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಸರ್ಕಾರದ ಅಭಿಪ್ರಾಯವನ್ನಷ್ಟೇ ಏಕಪಕ್ಷೀಯವಾಗಿ ಸಲ್ಲಿಸುವ ಬದಲು, ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಮುಕ್ತವಾಗಿ ಚರ್ಚಿಸಿ, ರಾಜ್ಯದ ಹಿತದೃಷ್ಟಿಯಿಂದ ಒಮ್ಮತದ ನಿಲುವನ್ನು ಕೇಂದ್ರಕ್ಕೆ ತಿಳಿಸುವುದು ಸೂಕ್ತ ಎಂಬ ಉದ್ದೇಶದಿಂದ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಲಾಗಿದೆ ಎಂದರು.

ಕಸ್ತೂರಿ ರಂಗನ್ ವರದಿ ಮತ್ತು ಬರಗಾಲ ಎರಡೂ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಮಹತ್ವದ ವಿಷಯಗಳಾಗಿವೆ. ಹೀಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳು ಪಕ್ಷಭೇದ ಮರೆತು ಸದನದಲ್ಲಿ ಸಮಗ್ರವಾಗಿ ಚರ್ಚಿಸಿ, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಗ್ಗಟ್ಟಿನ ನಿಲುವನ್ನು ಕೇಂದ್ರ ಸರ್ಕಾರದ ಮುಂದೆ ಮಂಡಿಸಬೇಕಿದೆ ಎಂದರು.

ರಾಜ್ಯಾದ್ಯಂತ ಗಂಭೀರ ಬರ ಪರಿಸ್ಥಿತಿ : ರಾಜ್ಯದಲ್ಲಿ ಈ ಬಾರಿ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಇದು ಕೆಲವೇ ತಾಲೂಕುಗಳಿಗೆ ಸೀಮಿತವಾಗಿಲ್ಲ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದ್ದು, ಕೃಷಿ ಚಟುವಟಿಕೆ ಮತ್ತು ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದರು.

ಹಿಂದಿನ ತೀವ್ರ ಬರ ಪರಿಸ್ಥಿತಿಗಳೊಂದಿಗೆ ಈ ವರ್ಷದ ಅಂಕಿ-ಅಂಶಗಳನ್ನು ಹೋಲಿಕೆ ಮಾಡಲಾಗುತ್ತಿದ್ದು, ಪ್ರಸ್ತುತ ಪರಿಸ್ಥಿತಿಯ ತೀವ್ರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೆಸಿಫಿಕ್ ಸಾಗರದ ಮೇಲ್ಮೈ ನೀರಿನ ತಾಪಮಾನ ಹೆಚ್ಚಳದಿಂದ ಉಂಟಾಗುವ ಎಲ್ ನಿನೋ ಪ್ರಕ್ರಿಯೆಯೂ ಮಳೆ ಕೊರತೆಗೆ ಕಾರಣವಾಗಿದ್ದು, ಈ ಬಾರಿ ಅದರ ತೀವ್ರತೆ ಹೆಚ್ಚಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular