ಗಣಪತಿ ಹಬ್ಬಕ್ಕೆ ವಿಘ್ನಾದೇಶ, ದೇವರ ಪ್ರಸಾದಕ್ಕೂ ಕೈ ಹಾಕಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ

ಸ್ಕ್ಯಾಮ್ ಸಿದ್ಧರಾಮಯ್ಯ ಅವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಗಣಪತಿ ಹಬ್ಬಕ್ಕೆ ವಿಘ್ನಾದೇಶ ಹೊರಡಿಸಿ ದೇವರ ಪ್ರಸಾದಕ್ಕೂ ಕಾಂಗ್ರೆಸ್ ಕೈ ಹಾಕಿದೆ ಎಂದು ಬಿಜೆಪಿ ಆರೋಪಿಸಿದೆ.

ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು FSSAI ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ವಿಘ್ನ ಆದೇಶವನ್ನು ಹೊರಡಿಸಿ ಸಮಸ್ತ ಹಿಂದೂಗಳ ಮನಸ್ಸನ್ನು ಘಾಸಿಗೊಳಿಸಿದ್ದಾರೆ ಎಂದು ಟೀಕಿಸಿದೆ. ‌

ಅನ್ಯಮತೀಯರ ಹಬ್ಬಗಳಲ್ಲಿ ಬೀದಿ ಬೀದಿಗಳಲ್ಲಿ ಆಹಾರ ಬೇಯಿಸುವಾಗ ಕೈ ಕಟ್ಟಿಕೊಂಡಿದ್ದ ಸಿದ್ದರಾಮಯ್ಯನವರು, ಈಗ ಹಿಂದೂಗಳ ಆರಾಧ್ಯ ದೈವ ಗಣಪತಿ ಹಬ್ಬದ ಆಚರಣೆಗೆ ಇಂಥ ವಿಘ್ನಾದೇಶಗಳನ್ನು ಹೊರಡಿಸುವ ಹಕೀಕತ್ತು ಏನಿದೆ? ಮುಖ್ಯಮಂತ್ರಿಗಳೇ, ನಿಮ್ಮ ಓಲೈಕೆಗೂ ಒಂದು ಮಿತಿ ಇರಲಿ ಎಂದು ಬಿಜೆಪಿ ತಿಳಿಸಿದೆ.

https://twitter.com/BJP4Karnataka/status/1831311637007016213

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read