HomeKarnatakaಕೃಷ್ಣ ಬೈರೇಗೌಡ ಕಂದಾಯ ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ

ಕೃಷ್ಣ ಬೈರೇಗೌಡ ಕಂದಾಯ ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ

“ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ ಆಗಿದೆ.‌ ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.

ಕರ್ನಾಟಕ ರಾಜ್ಯ ಸರ್ಕಾರ ಸಹಸ್ರ ದಿನಗಳು ಪೂರೈಸಿದ ಪ್ರಯುಕ್ತ ಹಾವೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

“ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌” ಎಂದು ಸಿದ್ದರಾಮಯ್ಯ ದೂರಿದರು.

“ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನುಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ” ಎಂದರು.

“ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ” ಎಂದು ತಿಳಿಸಿದರು.

“ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸದಾಭಿಪ್ರಾಯ ವ್ಯಕ್ತಪಡಿಸಿವೆ. ಹೀಗಿದ್ದರೂ ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ” ಎಂದರು.

“ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ. 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ” ಎಂದು ಹೇಳಿದರು.

“ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತೆ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆಯಿರಿಸಿದ್ದೇವೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಈಗ ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಸಲಹೆ ನೀಡಿದರು.

“ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನೆಯೇ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ” ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular