ದೇಶದಲ್ಲಿ ವಿಪಕ್ಷಗಳ ವಿರುದ್ಧ ಮೋದಿಯವರ ದ್ವೇಷದ ರಾಜಕಾರಣ ನಡೆಯುತ್ತಿದೆ: ಬಿಜೆಪಿ-ಜೆಡಿಎಸ್ ಪಿತೂರಿಗೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಹೊರಬಂದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17 ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ , ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು , ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ , ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ , ಕೇವಲ ನನ್ನ ಮೇಲಷ್ಟೇ ಅಲ್ಲ , ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಂದಿದ್ದರಿಂದ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದರು. ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ,ಅವರ ಪ್ರಯತ್ನ ವಿಫಲವಾಯಿತು ಎಂದರು.

ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿಯವರು ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ , ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ ಎಂದರು. ಇನ್ನೂ ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ , ಮುಂದಿನ ಪ್ರತಿಕ್ರಿಯೆಯನ್ನು ನೀಡುವುದಾಗಿ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read