HomeLive NewsBIG NEWS: ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

BIG NEWS: ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೆರೆ ಒತ್ತುವರಿ ತೆರವುಗೊಳಿಸಿದ ಡಿಸಿ, ಸಿಇಒಗಳ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಜಿಲ್ಲಾಧಿಕಾರಿಗಳು, ಸಿಇಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿದ ಸಿಎಂ, ಗರಂ ಆದರು. ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular