ಸಿದ್ದರಾಮಯ್ಯ ಪರ ಪ್ರತಿಭಟನೆಗೆ ಬರದಿದ್ದರೆ ಗೃಹಲಕ್ಷ್ಮಿ, ಅಕ್ಕಿ ದುಡ್ಡು, ಉಚಿತ ಕರೆಂಟ್ ಸೇರಿ ‘ಗ್ಯಾರಂಟಿ ಬಂದ್’ ಎಚ್ಚರಿಕೆ

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆಸಲಾಗಿದೆ.

ಸಿಎಂ ಪರವಾದ ಪ್ರತಿಭಟನೆಯಲ್ಲಿ ಭಾಗವಹಿಸದಿದ್ದರೆ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಡಂಗೂರ ಸಾರಲಾಗಿದೆ.

ನಂಜನಗೂಡು ತಾಲೂಕಿನ ಚಿನ್ನದಗುಡಿಹುಂಡಿ ಗ್ರಾಮದಲ್ಲಿ ಡಂಗೂರ ಸಾರಿ ಗ್ರಾಮಸ್ಥರನ್ನು ಪ್ರತಿಭಟನೆಗೆ ಕರೆಯಲಾಗಿದೆ. ಡಂಗೂರ ಸಾರಿ ವ್ಯಕ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಡೆಯುವ ಪ್ರತಿಭಟನೆಗೆ ಬರಬೇಕಂತೆ. ಇಲ್ಲವಾದಲ್ಲಿ ಗೃಹಲಕ್ಷ್ಮಿ ಯೋಜನೆ 2000 ರೂ., ಉಚಿತ ಪ್ರಯಾಣದ ಶಕ್ತಿ ಯೋಜನೆ, ಅಕ್ಕಿ ದುಡ್ಡು, ಉಚಿತ ಕರೆಂಟ್ ಸೇರಿ ಎಲ್ಲ ಗ್ಯಾರಂಟಿ ನಿಂತು ಹೋಗುತ್ತವೆ ಎಂದು ಹೇಳಿ ಡಂಗೂರ ಸಾರಿ ಪ್ರಚಾರ ಮಾಡಿದ್ದಾರೆ. ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read