ಮಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ನಡುವೆಯೇ ಮಂಗಳೂರ್ಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಟಾರ್ಗೆಟ್ ಇಟ್ಟುಕೊಂಡು ಮಂಗಳೂರಿಗೆ ಭೇಟಿ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್, ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ ಸಿಎಂ ಸ್ಥಾನದ ರೇಸ್ ನಲ್ಲಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ತಪ್ಪಿಸಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.
