HomeKarnatakaBIG NEWS: ಪ್ರಧಾನಿ ಮೋದಿ ಕೊಟ್ಟ ಭರವಸೆಗಳನ್ನು 10 ವರ್ಷಗಳಲ್ಲಿ ಈಡೇರಿಸಿದ್ದಾರಾ? ಬಿಜೆಪಿ ಪ್ರಣಾಳಿಕೆಗೆ ಸಿಎಂ...

BIG NEWS: ಪ್ರಧಾನಿ ಮೋದಿ ಕೊಟ್ಟ ಭರವಸೆಗಳನ್ನು 10 ವರ್ಷಗಳಲ್ಲಿ ಈಡೇರಿಸಿದ್ದಾರಾ? ಬಿಜೆಪಿ ಪ್ರಣಾಳಿಕೆಗೆ ಸಿಎಂ ವಾಗ್ದಾಳಿ

ಮಡಿಕೇರಿ: ಈ ಹಿಂದೆ ಕೊಟ್ಟ ಭರವಸೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ಈಡೇರಿಸಿದ್ದಾರಾ? ಮೊದಲು ಅವುಗಳ ಬಗ್ಗೆ ಚರ್ಚೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯದ್ದು ಬರೀ ಸುಳ್ಳು ಭರವಸೆ. ಈವರೆಗೂ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದರು.

ಪ್ರಧಾನಿ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದಿದ್ದರು. 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರಾ? ಯಾರಿಗಾದರೂ ಉದ್ಯೋಗ ಸಿಕ್ಕಿದೆಯಾ? ಮೇಕ್ ಇನ್ ಇಂಡಿಯಾ ಮಾಡುತ್ತೇನೆ ಎಂದರು. ಮೇಕ್ ಇನ್ ಇಂಡಿ ಮಾಡಿದರಾ? ಅಚ್ಚೇದಿನ್ ಆಯೇಗಾ ಎಂದರು ಅಚ್ಚೇ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದರು. ರೈತರ ಆದಾಯ ಹೆಚ್ಚಾಗಿದೆಯಾ? ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡುತ್ತೇನೆ ಎಂದು ಹೇಳಿದರು. ಕಡಿಮೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular