HomeKarnatakaBIG NEWS: ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ; ಜನ ಎಂದೂ ಅವರಿಗೆ ಪೂರ್ಣ ಪ್ರಮಾಣದ...

BIG NEWS: ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ; ಜನ ಎಂದೂ ಅವರಿಗೆ ಪೂರ್ಣ ಪ್ರಮಾಣದ ಅಧಿಕಾರ ಕೊಟ್ಟಿಲ್ಲ; ವಿಪಕ್ಷದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಬಿಜೆಪಿ ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾಗಿದೆ. ಆಪರೇಷನ್ ಬಿಟ್ಟರೆ ಬಿಜೆಪಿಗೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಪಡೆಯುವ ಕೆಲಸಬಿಜೆಪಿಯರು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಹಣ ಕೊಟ್ಟು ಶಾಸಕರನ್ನು ಖರೀದಿಸುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಗೊತ್ತಿಲ್ಲ. ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. 2008 ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ ಎಂದು ಟಿಕಿಸಿದರು.

ರಾಜ್ಯದಲ್ಲಿ ಜನರು ಬಿಜೆಪಿಗೆ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ. 2008, 2013, 2018 ರಲ್ಲಿ ಅವರು ಬಹುಮತದಿಂದ ಗೆದ್ದೇ ಇಲ್ಲ. ಕಾಂಗ್ರೆಸ್ ಪಕ್ಷ 2013ರಲ್ಲಿ ಗದ್ದಿದೆ. 2018 ರಲ್ಲಿ ಸೋತು ಪುನಃ 2023 ರಲ್ಲಿ 136 ಸ್ಥಾನಗಳನ್ನು ಪಡೆದು ಗೆದ್ದಿದ್ದೇವೆ ಎಂದರು. ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಹಾಗೂ ತೀರ್ಪಿನಂತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬರುತ್ತಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮಂಡ್ಯದಲ್ಲಿ ಹನುಮಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷರು ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಯಿಸಿ, ಮಂಡ್ಯದ ಪ್ರಕರಣದ ವಾಸ್ತವಾಂಶವೇ ಅವರಿಗೆ ತಿಳಿದಿಲ್ಲ. ಅಲ್ಲಿ ಕೇವಲ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಹಾರಿಸುವುದಾಗಿ ಕೆರಗೋಡು ಗ್ರಾಮಪಂಚಾಯ್ತಿಯಲ್ಲಿ ಅನುಮತಿ ಪಡೆದುಕೊಂಡು ಕೇಸರಿ ಧ್ವಜ ಹಾರಿಸಲು ಮುಂದಾಗಿದ್ದರು. ಅವರಿಗೆ ರಾಷ್ಟ್ರಧ್ವಜದ ಬಗ್ಗೆ ಯಾವುದೇ ಗೌರವವಿಲ್ಲ. ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ. ಇಂತಹ ರಾಷ್ಟ್ರಧ್ವಜವನ್ನು ಹಾಕಲು ಒಪ್ಪದಿರುವವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷ ರಾಷ್ಟ್ರಧ್ವಜಕ್ಕೆ ಸದಾ ಗೌರವ ನೀಡುತ್ತದೆ. 1935 ರಲ್ಲಿ ದೇಶಕ್ಕೆ ರಾಷ್ಟ್ರಧ್ವಜವನ್ನು ನೀಡಿದವರು ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular