BIG NEWS: ಲೋಕಸಭಾ ಚುನಾವಣೆ: 2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೀದರ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, . ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಹೇಳಿದರು.

ಇನ್ನು ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು.

ಇದೇ ವೇಳೆ ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read