BIG NEWS: ಅಪರೂಪದ ನಟನ ಅಗಲಿಕೆ ದು:ಖ ತಂದಿದೆ; ನೇತ್ರದಾನ ಮಾಡಿ ಸಮಾಜಕ್ಕೆ ಮಾದರಿಯಾದ ದ್ವಾರಕೀಶ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸುದೀರ್ಘವಾಗಿ ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅಗಲಿಕೆ ದು:ಖತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ದಿ.ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನ್ನಡ ಚಿತ್ರರಂಗಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಕೊಡುಗೆ ನೀಡಿದ್ದರು. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಎಂದರು.

ಡಾ: ರಾಜ್ ಕುಮಾರ್ ಮತ್ತು ಅವರ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು. ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ.

ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಾಜಕೀಯ, ಸಿನಿಮಾ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೆವು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ದ್ವಾರಕೀಶ್ ತಮ್ಮ ಎರಡು ಕಣ್ಣುಗಳನ್ನು ದಾನಮಾಡಿರುವುದು ಶ್ಲಾಘನೀಯ. ಸತ್ತ ನಂತರವೂ ಸಮಾಜಮುಖಿ ಕೆಲಸ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಮಹಾನ್ ಕಲಾವಿದನನ್ನು ಕಳೆದುಕೊಂಡು ಕನ್ನಡ ಚ್ಜಿತ್ರರಂಗ ಬಡವಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read