HomeKarnatakaBIG NEWS: ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಲಾಗದ HDK ಈಗ ತಾವು ಗೆಲ್ಲುತ್ತಾರೆಯೇ? ಸಿಎಂ ಸಿದ್ದರಾಮಯ್ಯ...

BIG NEWS: ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಲಾಗದ HDK ಈಗ ತಾವು ಗೆಲ್ಲುತ್ತಾರೆಯೇ? ಸಿಎಂ ಸಿದ್ದರಾಮಯ್ಯ ಟೀಕೆ

ಮೈಸೂರು: 2019ರ ಲೋಕಸಭಾ ಚುನಾವಣೆ ವೇಳೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಹೆಚ್.ಡಿ.ಕುಮಾರಸ್ವಾಮಿಗೆ ಮಗನನ್ನು ಗೆಲ್ಲಿಸಲು ಸಾಧ್ಯವಾಗಿಲ್ಲ ಈಗ ತಾವು ಗೆಲ್ಲುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯ ತನ್ನ ಕರ್ಮಭೂಮಿ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರೂ ಮಂಡ್ಯದಲ್ಲಿ ಅವರು ಗೆಲ್ಲಲು ಆಗಲ್ಲ. ಹಾಸನದವರಾಗಿರುವ ಕುಮಾರಸ್ವಾಮಿಗೆ ಮಂಡ್ಯ ಹೇಗೆ ಕರ್ಮಭೂಮಿಯಾದೀತು?ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಸಿಎಂ ಆಗಿದ್ದ ಕುಮಾರಸ್ವಾಮಿಯವರಿಗೆ ಮಂಡ್ಯದಿಂದ ಮಗನನ್ನು ಗೆಲ್ಲಿಸಲು ಆಗಿಲ್ಲ. ಈಗ ತಾವೇ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಈಗ ಅವರು ಗೆಲ್ಲಲು ಸಾಧ್ಯವೇ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular