HomeKarnatakaHDKಯವರದ್ದು ಯಾವಾಗಲೂ ಹಿಟ್ & ರನ್ ಕೇಸ್ ಎಂದ ಸಿಎಂ ಸಿದ್ದರಾಮಯ್ಯ

HDKಯವರದ್ದು ಯಾವಾಗಲೂ ಹಿಟ್ & ರನ್ ಕೇಸ್ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಆಂಡ್ ರನ್ ಕೇಸ್. ಸುಮ್ಮನೇ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿರುವ ಕುಮಾರಸ್ವಾಮಿ ಹೇಳಿಕೆಗಳಿಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ.ಕೆ ವೃಥಾ ಆರೋಪಗಳನ್ನು ಮಾಡುತ್ತಾರೆ. ಯಾವುದಕ್ಕೂ ದಾಖಲೆಗಳು ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ಸ್ ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಎಂದು ಅರೋಪಿಸಿದರು. ಏನದು ವೈಎಸ್ ಟಿ ಟ್ಯಾಕ್ಸ್? ಈ ಹಿಂದೆ ಪೆನ್‍ಡ್ರೈವ್ ತೋರಿಸಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದರು. ಮಾಡಿದರಾ? ಪೆನ್ ಡ್ರೈವ್ ನಲ್ಲಿ ಏನಾದರು ಇದ್ದರೆ ತಾನೆ ಹೊರಗೆಬಿಡುವುದು ಎಂದು ತಿರುಗೇಟು ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular