HomeLatest NewsBIG NEWS: ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕಿತ್ತು: ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ...

BIG NEWS: ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕಿತ್ತು: ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದರಾಮಯ್ಯ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಭದ್ರತಾ ವೈಫಲ್ಯವೇ ಉಗ್ರರ ದಾಳಿಗೆ ಕಾರಣ ಎಂದು ಹೇಳಿದರು.

ಮೈಸೂರಿನಲ್ಲಿ ಮಾಅತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು. ಈಗ ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಎಂದು ಪ್ರಶ್ನಿಸಿದರು.

ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ವಿಚಾರವಾಗಿ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular