ಬೆಂಗಳೂರು: ಬಹುಭಾಷಾ ನಟ ಕಮಲ್ ಹಾಸನ್ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದು, ಕಮಲ್ ಹಾಸನ್ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಪರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಮಲ್ ಹಾಸನ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬಾರದು, ಸಿನಿಮಾ ಬ್ಯಾನ್ ಮಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಕಮಲ್ ಹಾಸನ್ ತಮ್ಮ ಹೇಳಿಕೆ ಹಿಂಪಡೆಯಬೇಕು. ಕನ್ನಡಿಗರ ಕ್ಷಮೆ ಕೋರುವಂತೆ ಪಟ್ಟು ಹಿಡಿದಿದ್ದಾರೆ.
ನಟ ಕಮಲ್ ಹಾಸನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡಕ್ಕೆ ಬಹಳ ಸುದೀರ್ಘವಾದ ಇತಿಹಾಸವಿದೆ. ಪಾಪ ಅವರಿಗೆ ಕನ್ನಡದ ಬಗ್ಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.