BIG NEWS: ತಪ್ಪು ಮಾಡಿದವರನ್ನು ಏನು ಮಾಡಬೇಕು? ಸುಮ್ಮನೇ ಬಿಟ್ಟುಬಿಡಬೇಕಾ? ಸಿಎಂ ಪ್ರಶ್ನೆ

ಕೊಪ್ಪಳ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿಗಾಗಿ ಹೋರಾಡಿದ ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಕೊಪ್ಪಳ ತಾಲೂಕಿನ ಗಣಿಗೇರಾ ಏರ್ ಪೊರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ತಪ್ಪು ಮಾಡಿದವರನ್ನು ಏನು ಮಡಬೇಕು? ಸುಮ್ಮನೇ ಬಿಟ್ಟುಬಿಡಬೇಕಾ? ಎಂದು ಪ್ರಶ್ನಿಸಿದ್ದಾರೆ.

ಹಳೇ ಪ್ರಕರಣಗಳ ವಿಲೇವಾರಿ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ. ಅದರ ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಾವು ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ನಿರಪರಾಧಿಗಳನ್ನು ಬಂಧಿಸುವ ಕೆಲಸವನ್ನೂ ನಾವು ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read