BIG NEWS: ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಮೈಸೂರು: ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃತ್ಯದ ಬಳಿಕ ಕೊಲೆಗಾರರನ್ನು ತಕ್ಷಣ ಬಂಧಿಸಲಾಗಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನಿಸಲಾಗುವುದು ಎಂದರು.

ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸುತ್ತೇವೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ಖಂಡನೀಯ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ಬಿಜೆಪಿ ನಯಕರು ರಾಜಕೀಯಕ್ಕಾಗಿ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read