BIG NEWS: ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು: ಸಿಎಂ ಮಾಹಿತಿ

ಬೆಂಗಳೂರು: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಬೆಂಬಲಿಸಿ ಇಂದು ರಾಯಚೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಸಮಾವೇಶವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಕಾಶ್ಮೀರದ ಪಹಲ್ಗಾಂ ನಲ್ಲಿ ಅಮಾಯಕ 26ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ.
ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read