HomeKarnatakaBIG NEWS: ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

BIG NEWS: ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಯಾರೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ ಎಂದು ಗುಡುಗಿದ್ದಾರೆ.

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ನಡುವೆ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬರ್ಥದಲ್ಲಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಈ ಬಗ್ಗೆ ಚಾಮರಾಜನಗರದ ಹೆಗ್ಗವಾಡಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೋ ಒಬ್ಬ ಹೇಳಿದ್ರೆ ಆಗಲ್ಲ. ಈಗ ಪ್ರತಾಪ್ ಸಿಂಹ ಅವರಿಗೆ ಬಿಜೆಪಿಯವರು ಟಿಕೆಟ್ ನಿರಾಕರಿಸಿದ್ದಾರಲ್ಲ ಯಾಕೆ? ನಾನು ಹೊಂದಾಣೆಕೆ ಮಾಡಿದ್ನಾ? ಅಥವಾ ಯದುವೀರ್ ಒಡೆಯರ್ ಗೆ ಹೋಗಿ ಬಿಜೆಪಿಗೆ ನಿಲ್ಲಿ ಎಂದು ಹೇಳಿದ್ನಾ? ಸುಮ್ಮನೇ ಆರೋಪ ಮಾಡುವುದಲ್ಲ. ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡ್ತಿಲ್ಲ ಎನಿಸುತ್ತಿದೆ. ಅದನ್ನು ಬಿಟ್ಟು ನೀವೇ ಸೃಷ್ಟಿ ಮಾಡಿಕೊಂಡು ಹೊಂದಾಣಿಕೆ ರಾಜಕೀಯ ಎಂದರೆ ಹೇಗೆ? ಎಂದು ಗರಂ ಆದರು.

For Latest News Updates, Join Our Whatsapp Community🚩
RELATED ARTICLES

Most Popular