HomeLatest NewsBIG NEWS: ಆರ್ ಸಿಬಿ ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದ ಸಿಎಂ...

BIG NEWS: ಆರ್ ಸಿಬಿ ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದ ಸಿಎಂ ಸಿದ್ದರಾಮಯ್ಯ

ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ ಆರ್ ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿದ್ದು ಯಾರು ಎಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಗೌರಿಬಿದನೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್ ಸಿಬಿ ಸನ್ಮಾನ ಕಾರ್ಯಕ್ರಮಕ್ಕೆ ರಾಜ್ಯಪಾಲರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು.

ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು ಎಂದರು. ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂಬ ಸುದ್ದಿ ಹರಡಿದ್ದು, ಹಾಗಾಗಿ ಈಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.

ಕಾಲ್ತುಳಿತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳನ್ನೂ ಈಗಾಗಲೇ ಪಾವತಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular