HomeKarnatakaBIG NEWS: ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ವಿಚಾರ; ಸಿಎಂ ಹೇಳಿದ್ದೇನು?

BIG NEWS: ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ವಿಚಾರ; ಸಿಎಂ ಹೇಳಿದ್ದೇನು?

ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿದರೆ ಒಳ್ಳೆಯದು. ಎದುರಾಳಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅವರಿಗೆ ಸೋಲುವ ಭೀತಿ ಶುರುವಾಗಿದೆ ಎಂದು ಟಾಂಗ್ ನೀಡಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಬಗ್ಗೆ ನಾನಾಗಲಿ, ಯತೀಂದ್ರ ಆಗಲಿ ಆ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಸುಮ್ಮನೆ ಊಹಾಪೋಹಗಳು ಅಷ್ಟೇ ಎಂದರು.

ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೆಟ್ ನೀಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular