HomeKarnataka14 ವರ್ಷದಿಂದ ಸಿ.ಎಲ್.ಪಿ. ನಾಯಕರಾಗಿ ಸಿದ್ದರಾಮಯ್ಯ ದಾಖಲೆ

14 ವರ್ಷದಿಂದ ಸಿ.ಎಲ್.ಪಿ. ನಾಯಕರಾಗಿ ಸಿದ್ದರಾಮಯ್ಯ ದಾಖಲೆ

ಬೆಂಗಳೂರು: ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯ 14 ವರ್ಷಗಳಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವುದು ವಿಶೇಷವಾಗಿದೆ.

ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ 14 ವರ್ಷಗಳಿಂದ ಅವರು ಶಾಸಕಾಂಗ ನಾಯಕರಾಗಿದ್ದಾರೆ. 2006ರಲ್ಲಿ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದರು. ಆಗ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಗೆ ಆಯ್ಕೆಯಾಗಿದ್ದರಿಂದ 2009 ರಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಮತ್ತೆ ಶಾಸಕಾಂಗ ನಾಯಕರಾಗಿದ್ದರು. 2018ರಲ್ಲಿ ಕಾಂಗ್ರೆಸ್ ಸೋತಾಗ ಸಿದ್ದರಾಮಯ್ಯ ಅವರನ್ನೇ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಸಲಾಗಿತ್ತು. ಮೈತ್ರಿ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ನಂತರ ಪ್ರತಿಪಕ್ಷ ನಾಯಕರಾಗಿದ್ದರು.

ಈಗ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಿದ್ದು, ಸಿದ್ದರಾಮಯ್ಯ ಮತ್ತೆ ಸಿಎಲ್‍ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇಷ್ಟು ಸುಧೀರ್ಘ ಅವಧಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದವರು ರಾಜ್ಯದಲ್ಲಿ ಯಾರು ಇಲ್ಲ. ಸಿದ್ದರಾಮಯ್ಯ ಪಕ್ಷದ ಇತಿಹಾಸದಲ್ಲಿಯೇ 14 ವರ್ಷಗಳಿಂದ ಶಾಸಕಾಂಗ ನಾಯಕರಾಗಿದ್ದಾರೆ. 13 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಅವರು ಶಾಸಕಾಂಗ ನಾಯಕನಾಗಿಯೂ ಇತಿಹಾಸ ಬರೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular