HomeKarnatakaBIG NEWS: ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್...

BIG NEWS: ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೋಳಿವಾಡ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಳಿವಾಡ, ಎಷ್ಟೇ ಕಳಂಕ ರಹಿತರೆಂದು ಹೇಳಿದರೂ ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ನಿಷ್ಕಳಂಕರಾಗಿ ಹೊರಬಂದ ಬಳಿಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ. ಸಿದ್ದರಾಮಯ್ಯ ಜೊತೆ 136 ಕಾಂಗ್ರೆಸ್ ಶಾಸಕರಿದ್ದಾರೆ. ಪಕ್ಷದ ದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ತನಿಖೆ ಬಳಿಕ ನಿಷ್ಕಳಂಕರಾಗಿ ಹೊರಬಂದು ಮತ್ತೆ ಸಿಎಂ ಆಗಲಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular