BIG NEWS: ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ: ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಕೆ

ಬೆಳಗಾವಿ: ಸವದತ್ತಿಯ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಗುಡ್ಡಕ್ಕೆ ಆಗಮಿಸಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮ ಗುಡ್ಡ ಕ್ಷೇತ್ರಕ್ಕೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹೆಸರಲ್ಲಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿ, ಮಂಗಳಾರತಿ ನೆರವೇರಿಸಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು.

ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿಶ್ವಾಸ್ ವೈದ್ಯ, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read