HomeKarnatakaBIG NEWS: ಗ್ಯಾರಂಟಿ ಯೋಜನೆಗಳು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿವೆ; ಬಿಜೆಪಿ, ಜೆಡಿಎಸ್ ನಾಯಕರಿಗೆ ಸಿಎಂ ತಿರುಗೇಟು

BIG NEWS: ಗ್ಯಾರಂಟಿ ಯೋಜನೆಗಳು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿವೆ; ಬಿಜೆಪಿ, ಜೆಡಿಎಸ್ ನಾಯಕರಿಗೆ ಸಿಎಂ ತಿರುಗೇಟು

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರುವ ವಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅವರಿಗೆ ನಮ್ಮ ಗ್ಯಾರಂಟಿ ಯೊಜನೆಗಳು ನುಂಗಲಾರದ ತುತ್ತಾಗಿವೆ. ಸಹಿಸಲು ಸಾಧ್ಯವಾಗದೇ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀದಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲ. ಆದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ ಎಂದರು.

ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ. ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular