HomeEntertainmentಡಾ.ರಾಜ್ ಕುಮಾರ್ ಸಿನಿಮಾಗಳಲ್ಲಿ ಸಾಮಾಜಿಕ‌ ಜವಾಬ್ದಾರಿ ಇತ್ತು

ಡಾ.ರಾಜ್ ಕುಮಾರ್ ಸಿನಿಮಾಗಳಲ್ಲಿ ಸಾಮಾಜಿಕ‌ ಜವಾಬ್ದಾರಿ ಇತ್ತು

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ಸಿಕ್ಕಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಲನ ಚಿತ್ರೋತ್ಸವ ಉದ್ಘಾಟಿಸಿದರು.

ಅರ್ಥಪೂರ್ಣ ಸಿನಿಮಾಗಳ ಪ್ರದರ್ಶನದೊಂದಿಗೆ, ಅವುಗಳ‌ ಆಶಯಗಳು ಹೆಚ್ಚೆಚ್ಚು ಜನರನ್ನು ತಲುಪುವ ಮೂಲಕ ಈ ವರ್ಷದ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಡಾ.ರಾಜ್ ಚಿತ್ರಗಳು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ವರನಟ ಡಾ.ರಾಜ್ ಕುಮಾರ್ ನೆನಪು ಮಾಡಿಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ.
ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು” ಎಂದು ಹೇಳಿದರು.

“ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಾಗಲಿ” ಎಂದು ಹಾರೈಸಿದರು.

“ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರಗಳು ಒಂದು ಮಾಧ್ಯಮ‌ವಾಗಿ ನೆರವಾಗಬೇಕು” ಎಂದು ಕರೆ ನೀಡಿದರು.

“ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ಚಲಚಿತ್ರದಿಂದ ಸಾಧ್ಯವಿದೆ” ಎಂದರು.

“ಸಮಾಜಮುಖಿ ಸಿನಿಮಾ ಮಾಡುವವರಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ಧವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ” ಎಂದು ಭರವಸೆ ನೀಡಿದರು. “ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ಧತೆ ಅಭಿನಂದನೀಯ ಮತ್ತು ಅನುಕರಣೀಯ” ಎಂದು ಹೇಳಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular