HomeKarnatakaBIG NEWS: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ; ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿಲ್ಲ...

BIG NEWS: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ; ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿಲ್ಲ ಯಾಕೆ? ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪ್ರಶ್ನೆ

ಕೋಲಾರ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ವಿಳಂಬವಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿ ಶುಚಿಗೊಳಿಸಿದ ಪ್ರಕರಣದಲ್ಲಿ ಮೂವರನ್ನು ಮಾತ್ರ ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನೂ ಇಬ್ಬರು ಆರೋಪಿಗಳನ್ನು ಏಕೆ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿರುವ ಪ್ರಕರಣ ಇದೊಂದು ಕ್ರೂರ ಕೃತ್ಯ. ಇಂಥಾದ್ದನ್ನು ಸಹಿಸಲು ಸಾಧ್ಯವಿಲ್ಲ. ಇನ್ನೆರಡು ದಿನಗಳಲ್ಲಿ ಉಳಿದಿಬ್ಬರು ಆರೋಪಿಗಳನ್ನು ಬಂಧಿಸಬೇಕು ಎಂದು ತಾಕೀತು ಮಾಡಿದರು.

ಈ ಘಟನೆ ಇಡೀ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಒಂದು ಪಾಠ. ಯಾವುದೇ ಕಾರಣಕ್ಕೂ ಇಂತಹ ಘಟನೆ ಮರುಕಳಿಸಬಾರದು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular