HomeKarnatakaBIG NEWS: ಖರ್ಗೆ ನಿವಾಸದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್

BIG NEWS: ಖರ್ಗೆ ನಿವಾಸದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಆರಂಭದ ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಹಾಗೂ ನಂತರದ ಎರಡುವರೆ ವರ್ಷ ಡಿ.ಕೆ. ಶಿವಕುಮಾರ್ ಸಿಎಂ ಎಂಬ ನಿರ್ಧಾರಕ್ಕೆ ಬಂದಿದೆ.

ಈ ಬೆಳವಣಿಗೆ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಂದೇ ಕಾರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಲಿಕಾರ್ಜುನ ಖರ್ಗೆ ಇಬ್ಬರು ನಾಯಕರ ಕೈ ಎತ್ತಿ ಯಾವುದೇ ಅಸಮಾಧಾನವಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರು ನಾಯಕರು ಸಂತೋಷದಿಂದಲೇ ಖರ್ಗೆ ಜೊತೆ ಚರ್ಚೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular