HomeLatest Newsಇನ್ನೂ 3 ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಕೆ: ಸಚಿವ ಬೈರತಿ ಸುರೇಶ್

ಇನ್ನೂ 3 ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಕೆ: ಸಚಿವ ಬೈರತಿ ಸುರೇಶ್

ಬಳ್ಳಾರಿ: ಎರಡು ಬಾರಿ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಆಡಳಿತ ನೀಡಿರುವ ಸಿದ್ಧರಾಮಯ್ಯ ಅವರು ಇನ್ನೂ ಮೂರು ವರ್ಷ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಭಾನುವಾರ ಭಕ್ತ ಕನಕದಾಸ ಮತ್ತು ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಎರಡು ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅತ್ಯುತ್ತಮ ಆಡಳಿತ ನೀಡಿದ್ದಾರೆ. ಇನ್ನು ಮೂರು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆದು ಹತ್ತು ವರ್ಷ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷ ಆಡಳಿತ ನೀಡುವ ಮುತ್ಸದ್ದಿ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಿ ಕಪ್ಪು ಚುಕ್ಕೆ ಇಡುವ ಹುನ್ನಾರ ನಡೆಸಿವೆ. ಆದರೆ, ಅವರ ಪ್ರಯತ್ನ ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular