ಬೆಂಗಳೂರು: ಕಬ್ಬು ಬೆಳೆಗಾರರು, ರೈತ ಮುಖಂಡರ ಜೊತೆ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತುಮಕೂರು ಪ್ರವಾಸ ರದ್ದುಗೊಂಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತುಮಕೂರು ಪ್ರವಾಸ ನಿಗದಿಯಾಗಿತ್ತು. ತುಮಕೂರಿನಲ್ಲಿ ಮಾಜಿ ಸಚಿವ, ಶಾಸಕ ಕೆ.ಎನ್.ರಾಜಣ್ಣ ನಿವಾಸದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುವವರಿದ್ದರು. ಆದರೆ ಕೊನೇ ಕ್ಷಣದಲ್ಲಿ ಸಿಎಂ ತುಮಕೂರು ಪ್ರವಾಸ ರದ್ದಾಗಿದೆ.
ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಬಳಿಕ ಕಬ್ಬು ಬೆಳೆಗಾರರ ಮುಖಂಡರ ಸಭೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
