HomeKarnatakaBIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲು

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ.

ಚುನಾವಣೆ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ಹಾಗೂ ಮುಡಾ ಅಕ್ರಮ ವಿಚಾರವಾಗಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಚುನಾವಣಾ ಆಯೋಗಕ್ಕೆ ಈ ದೂರು ನೀಡಿದ್ದಾರೆ.

2018ರ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಅಫಿಡವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ ಎಂದು ನಮೂದಿಸಿದ್ದರು. ಆದರೆ 2005ರಲ್ಲಿಯೇ ಈ ಜಮೀನು ಪರಿವರ್ತನೆ ಮಾಡಿಸಿದ್ದಾಗಿ ದಾಖಲೆ ನೀಡಿ ದೂರು ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್ ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಲಾಗಿದೆ. 14 ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ಸಿದರಾಮಯ್ಯ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮತ್ತೊಂದು ದೂರು ಸಲ್ಲಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular