HomeKarnatakaJD'S’ ಅಲ್ಲ ಈಗ JD'C’; ಪರಿಷತ್ ನಲ್ಲಿ ಜೆಡಿಎಸ್ ಸದಸ್ಯರ ಕಾಲೆಳೆದ ಸಿಎಂ ಸಿದ್ದರಾಮಯ್ಯ

JD’S’ ಅಲ್ಲ ಈಗ JD’C’; ಪರಿಷತ್ ನಲ್ಲಿ ಜೆಡಿಎಸ್ ಸದಸ್ಯರ ಕಾಲೆಳೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಸದಸ್ಯರಿಗೆ ಈಗ ನಿಮ್ಮ ಪಕ್ಷ JD’S’ ಅಲ್ಲ ಈಗ JD’C’ ಆಗಿದೆ ಕಾಲೆಳೆದಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಭಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ‘ಸರ್ವೋದಯವಾಗಲಿ ಸರ್ವರಲಿ’ ಎನ್ನುವ ಮಾತನ್ನು ಉಲ್ಲೇಖಿಸಿದರು. ಇದಕ್ಕೆ ಪ್ರತಿಕ್ರಿಯಿಸಲು ಮುಂದಾದ ಜೆಡಿಎಸ್ ಸದಸ್ಯ ಬೋಜೇಗೌಡ ಕುವೆಂಪು ಅವರ ಮಾತನ್ನು ಮುಂದುವರೆಸಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದರು. ಅಲ್ಲದೇ ಈಗ ನಿಮ್ಮದು JD’S’ ಅಲ್ಲ ಈಗ JD’C’ ಆಗಿದೆ ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೇಬಲ್ ಬಡಿದ ಘಟನೆ ನಡೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular