HomeKarnataka5 ವರ್ಷವೂ ಸಿದ್ದರಾಮಯ್ಯ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

5 ವರ್ಷವೂ ಸಿದ್ದರಾಮಯ್ಯ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

ಮೈಸೂರು: ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ತಂದೆಯವರೇ ವಿಧಾನ ಮಂಡಲ ಅಧಿವೇಶನದಲ್ಲಿ ಸ್ಪಷ್ಟಪಡಿಸಿರುವುದರಿಂದ ಬೇರೆ ಚರ್ಚೆ ಇಲ್ಲ. ಎರಡೂವರೆ ವರ್ಷದಿಂದಲೂ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಹೇಳುತ್ತೇನೆ, ಅವರ ಮಾತೇ ನನ್ನದು ಎಂದು ಹೇಳಿದ್ದಾರೆ.

ಸಚಿವ ಸಂಪುಟ ಪುನರ್ ರಚನೆಗಾಗಿ ಶಾಸಕರು ದೆಹಲಿಗೆ ಹೋಗಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವುದಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧವಿಲ್ಲ. ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧವಿಲ್ಲ. ಸರ್ಕಾರ ಸುಭದ್ರವಾಗಿದೆ. ಸಿಎಂ ಸ್ಥಾನವೂ ಭದ್ರವಾಗಿದೆ. ನಾನು ಎಷ್ಟು ಬಾರಿ ಎಂದು ಇದನ್ನು ಸ್ಪಷ್ಟಪಡಿಸಲಿ ಎಂದು ಯತೀಂದ್ರ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸಂಪುಟ ಪುನರ್ ರಚನೆಗೆ ಶಾಸಕರು ದೆಹಲಿಗೆ ಹೋಗಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಆಗುತ್ತಿರುವುದರಿಂದ ಸಂಪುಟ ಪುನರ್ ರಚಿಸಬೇಕೆಂದು ಕೇಳುತ್ತಿದ್ದಾರೆ. ಇದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ತಂದೆಯವರು ಮುಖ್ಯಮಂತ್ರಿ ಆಗಿರುವವರಿಗೆ ನಾನು ಕೇಳುವುದಿಲ್ಲ ಎಂದು ಹೇಳಿದ್ದಾರೆ.

ಪುತ್ರನನ್ನು ಮುಖ್ಯಮಂತ್ರಿ ಹಣ ವಸೂಲಿಗೆ ಇಟ್ಟುಕೊಂಡಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಯತೀಂದ್ರ, ಅದಕ್ಕೆ ಸಾಕ್ಷ್ಯ ಕೊಡಲಿ. ವರ್ಗಾವಣೆ ದಂಧೆ ಎನ್ನುತ್ತಾರೆ. ಸಾಕ್ಷ್ಯ ಇದೆಯೇ? ಸಾಕ್ಷ್ಯ ಕೊಟ್ಟು ಆರೋಪ ಮಾಡಿದರೆ ಬೆಲೆ ಎಂದು ಯತಿಂದ್ರ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular