ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚಿಸಲು ತುರ್ತು ಭೇಟಿಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗುರುವಾರ ಪತ್ರ ಬರೆದಿದ್ದಾರೆ.
ಈಗಿನ ಸಮಸ್ಯೆಗೆ ಕೇಂದ್ರವೇ ಹೊಣೆಯಾಗಿದ್ದು, ನೀವೇ ಪರಿಹರಿಸಬೇಕು ಎಂದು ಕಬ್ಬು ಬೆಳೆಗಾರರ ಹೋರಾಟ ಕುರಿತು ಮೋದಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸಾಗಾಣೆ, ಕಟಾವು ವೆಚ್ಚ ಬಿಟ್ಟು ಪ್ರತಿ ಟನ್ ಕಬ್ಬಿಗೆ 3500 ರೂ. ನೀಡಬೇಕು. ಕಬ್ಬು ಬೆಳೆಗಾರರ ಸಮಸ್ಯೆ ಚರ್ಚೆಗಾಗಿ ತುರ್ತು ಭೇಟಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಹೆದ್ದಾರಿ ಬಂದ್ ಗೆ ಕರೆ ನೀಡಿದ್ದಾರೆ. ಈ ಸಮಸ್ಯೆಗಳಿಗೆ ಮೂಲಭೂತವಾಗಿ ಕೇಂದ್ರ ಸರ್ಕಾರವೇ ಪರಿಹಾರ ಒದಗಿಸಬೇಕು. ಕಬ್ಬಿಗೆ ಎಫ್.ಆರ್.ಪಿ. ನಿಗದಿ ಮಾಡಿರುವುದು ಕೇಂದ್ರ ಸರ್ಕಾರ. ಹೀಗಾಗಿ ರೈತರ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
North Karnataka’s sugarcane farmers are in distress. Despite our best efforts, the issue demands Central intervention.
— Siddaramaiah (@siddaramaiah) November 6, 2025
I have sought an urgent meeting with Hon’ble Prime Minister Shri @narendramodi to resolve the crisis in the interest of our farmers and rural economy.
I am… pic.twitter.com/HMbuX9mZOA
