HomeLatest NewsBIG NEWS: 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

BIG NEWS: 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕೂಡ್ಲಿಗಿ: 870 ಕೋಟಿ ವೆಚ್ಚದ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ. 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಶ್ಲಾಘಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ 1750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.

ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ ಎಂದು ಲೆಕ್ಕ ಮುಂದಿಟ್ಟರು.

ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular