HomeKarnatakaBIG NEWS: ನಮ್ಮ ಗ್ಯಾರಂಟಿ ಯೋಜನೆ ವಿರೋಧಿಸಿದ್ದ ಪ್ರಧಾನಿ ಮೋದಿಯೇ ಇಂದು ಗ್ಯಾರಂಟಿ ಘೋಷಿಸುತ್ತಿದ್ದಾರೆ; ಸಿಎಂ...

BIG NEWS: ನಮ್ಮ ಗ್ಯಾರಂಟಿ ಯೋಜನೆ ವಿರೋಧಿಸಿದ್ದ ಪ್ರಧಾನಿ ಮೋದಿಯೇ ಇಂದು ಗ್ಯಾರಂಟಿ ಘೋಷಿಸುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ, ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರೇ ಗ್ಯಾರಂಟಿ ಘೋಷಣೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಯೋಜನೆಗಳನ್ನೇ ಕಾಪಿ ಮಾಡಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ತರುವುದಾಗಿ ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಮಧ್ಯಪ್ರದೇಶದಲ್ಲಿ ಗ್ಯಾರಂಟಿ ಯೋಜನೆ ತರುವುದಾಗಿ ಹೇಳಿದ್ದಾರೆ. ಈವರೆಗೆ ಮಧ್ಯಪ್ರದೇಶದಲ್ಲಿದ್ದ ಬಿಜೆಪಿ ಸರ್ಕಾರ ಯಾವ ಯೋಜನೆಯನ್ನೂ ಜಾರಿ ಮಾಡಿಲ್ಲ. ಜನರಿಗೆ ಯಾವ ಅನುಕೂಲವನ್ನೂ ಮಾಡಿ ಕೊಟ್ಟಿಲ್ಲ. ಈಗ ಚುನಾವಣೆ ಬರುತ್ತಿದ್ದಂತೆ ಘೋಷಣೆಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಯಾವತ್ತೂ ನುಡಿದಂತೆ ನಡೆದಿಲ್ಲ. ಇದು ಜನರಿಗೂ ಗೊತ್ತಿರುವ ವಿಚಾರ. ಹಾಗಾಗಿ ಬಿಜೆಪಿಯವರು ಏನೇ ಹೇಳಿದರು ಜನರು ನಂಬಲ್ಲ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular