HomeLatest NewsBIG NEWS: ಬಿಜೆಪಿ ಪಾದಯಾತ್ರೆ ಏಕೆ ಕೈಗೊಳ್ಳಬೇಕು? ಸಿಎಂ ಸಿದ್ದರಾಮಯ್ಯ ಪ್ರಶ್ನೆ

BIG NEWS: ಬಿಜೆಪಿ ಪಾದಯಾತ್ರೆ ಏಕೆ ಕೈಗೊಳ್ಳಬೇಕು? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಂಗಳೂರು: ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಾದಯಾತ್ರೆಗೆ ಸಿದ್ಧತೆ ನಡೆಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಏಕೆ ಪಾದಯಾತ್ರೆ ಮಾಡಬೇಕು? ಎಂದು ಪ್ರಶಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ವಿಚಾರವಗಿ, ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಂಡಿದ್ದೆವು. ಇವರು ಪಾದಯಾತ್ರೆ ಏಕೆ ಮಾಡಬೇಕು ಎಂದು ಪ್ರಶ್ನಿಸಿದರು.

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಪ್ರಚೋದನೆಯಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನಾರ್ದನ ರೆಡ್ಡಿ , ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರಿಂದ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ. ಅನಗತ್ಯವಾಗಿ ಆರೋಪಗಳನ್ನು ಮಾಡುತ್ತೈದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular