BIG NEWS: ಬಿಜೆಪಿ ನಾಯಕರ ಅಪಪ್ರಚಾರಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ: 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಪ್ರಶ್ನೆ

ಚಿಕ್ಕಬಳ್ಳಾಪುರ: ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು.

ಅಧಿಕಾರ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು. ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read