HomeLatest NewsBIG NEWS: ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ...

BIG NEWS: ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ದ್ವೇಷ ಭಾಷಣ ತಡೆ ಮಸೂದೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಶಿದ್ದರಾಮಯ್ಯ, ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು.

ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ, ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿಯವರು ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಪ್ರಶ್ನಿಸಿದರು. ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular