HomeKarnatakaBIG NEWS: ಶಾಸಕ ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BIG NEWS: ಶಾಸಕ ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ‘ಕಲೆಕ್ಷನ್ ಮಾಸ್ಟರ್’ ಎಂದು ಪೋಸ್ಟ್ ಹಾಕಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾ ಶಾಸಕನಾಗಿರುವುದು ಮೊನ್ನೆ. ನಾನು 1983ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ನನ್ನನ್ನು ಯಾರೂ ಈ ರೀತಿ ಕರೆದಿರಲಿಲ್ಲ ಎಂದು ಕಿಡಿ ಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕ ಹರೀಶ್ ಪೂಂಜಾ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಆ ಮಾತನ್ನು ಹಿಂದಿನ ಸರ್ಕಾರದ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಲೆಕ್ಷನ್ ಮಾಸ್ಟರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular