HomeLatest Newsಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ ಎಂಬ ವಿಪಕ್ಷ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರದ್ದು ಮೊಸರಿನಲ್ಲಿ ಕಲ್ಲು ಹುಡ್ಕುವ ಕೆಲಸ ಎಂದು ಟಾಂಗ್ ನೀಡಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದರು.

ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲವಾದ್ದರಿಂದ, ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯಿಲ್ಲ. ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular